ನವದೆಹಲಿ, ಡಿ.29: ಕಾಂಗ್ರೆಸ್ ಭಾನುವಾರ ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ 140 ನೇ ಸಂಸ್ಥಾಪನಾ ದಿನವನ್ನು ಆಚರಿಸಿತು. ಈ ಸಂದರ್ಭದಲ್ಲಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನವದೆಹಲಿಯ ಇಂದಿರಾ ಭವನದಲ್ಲಿ ಧ್ವಜಾರೋಹಣ ಮಾಡಿದರು. ಸಂಸ್ಥಾಪನಾ ದಿನದ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಕಾಂಗ್ರೆಸ್ ಒಂದು ಸಿದ್ಧಾಂತವನ್ನು ಪ್ರತಿನಿಧಿಸುತ್ತದೆ ಮತ್ತು ಸಿದ್ಧಾಂತ ಎಂದಿಗೂ ಸಾಯುವುದಿಲ್ಲ. ಪಕ್ಷದ ಮಹಾನ್ ನಾಯಕರ ಕೊಡುಗೆಗಳಿಂದಾಗಿ ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ಹೊರಹೊಮ್ಮಿದೆ ಎಂದು ಹೇಳಿದರು.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಹಿರಿಯ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಿದ್ದರು.




By
ForthFocus™