ತೆಲಂಗಾಣ: ರಾಹುಲ್ ಗಾಂಧಿಗೆ ಇಡಿ ಸಮನ್ಸ್‌ನ ವಿರುದ್ಧ ಹೈದರಾಬಾದ್‌ನಲ್ಲಿ ಇಂದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದ ಘಟನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಒಳಗಾಗಿದೆ.
ಪೊಲೀಸ್ ಸಿಬ್ಬಂದಿ ರೇಣುಕಾ ಚೌಧರಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ ಅಲ್ಲೇ ಇದ್ದ ಓರ್ವ ಸಿಬ್ಬಂದಿಯ ಕಾಲರ್ ಹಿಡಿದು ಅವರನ್ನು ಎಳೆದಾಡುವ ರೀತಿಯಲ್ಲಿ ರೇಣುಕಾ ಚೌಧರಿ ವರ್ತಿಸಿದ ವಿಡಿಯೋ ವೈರಲ್ ಆಗಿದೆ.
ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಹಲ್ಲೆ ಮಾಡಿಲ್ಲ. ನಾನು ನಿಯಂತ್ರಣವನ್ನು ಕಳೆದುಕೊಳ್ಳುತ್ತಿದ್ದೆ ಅದಕ್ಕೆ ಕಾಲರ್ ಹಿಡಿದೆ ಎಂದು ಡ್ಯಾಮೇಜ್ ಕಂಟ್ರೋಲ್ ಹೇಳಿಕೆ ನೀಡಿದ್ದಾರೆ.
ಇದು ಪೊಲೀಸರಿಗೆ ಮಾಡಿದ ಅವಮಾನ. ರಾಜಕೀಯ ಪಕ್ಷದ ನಾಯಕಿಯೊಬ್ಬರು ಸಮಾಜದ ಸ್ವಾಸ್ಥ್ಯ ಕಾಪಾಡುವ ಪೊಲೀಸರ ಮೇಲೆ ಗೂಂಡಾ ವರ್ತನೆ ತೋರಿದ್ದು ಖಂಡನೀಯ ಎಂದು ನೆಟ್ಟಿಗರು ಟ್ವಿಟರ್ ನಲ್ಲಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.