Friday, November 22, 2024
Friday, November 22, 2024

ಹರ್ಯಾಣ ವಿಧಾನಸಭಾ ಚುನಾವಣೆ-ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಹರ್ಯಾಣ ವಿಧಾನಸಭಾ ಚುನಾವಣೆ-ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

Date:

ನವದೆಹಲಿ, ಸೆ.18: ಹರ್ಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಬುಧವಾರ ಬಿಡುಗಡೆಗೊಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಏಳು ಭರವಸೆಗಳನ್ನು ಈಡೇರಿಸಲಾಗುವುದು. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಪ್ರತಿ ಕುಟುಂಬಕ್ಕೆ 300 ಯೂನಿಟ್ ವಿದ್ಯುತ್‌ ನೀಡುವುದಾಗಿ ಅವರು ಘೋಷಿಸಿದರು. ಎರಡು ಲಕ್ಷ ನೇಮಕಾತಿಗಳನ್ನು ಮಾಡಲಾಗುವುದು ಮತ್ತು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲಾಗುವುದು ಎಂದು ಅವರು ಘೋಷಿಸಿದರು. ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ನೀಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಹರ್ಯಾಣದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ವಿಧವೆಯರು, ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ (ದಿವ್ಯಾಂಗರಿಗೆ) 500 ರೂಪಾಯಿಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಮತ್ತು 6,000 ರೂಪಾಯಿ ಮಾಸಿಕ ಪಿಂಚಣಿ ನೀಡಲಿದೆ. ಹರ್ಯಾಣವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡಲಾಗುವುದು ಎಂದರು. 25 ಲಕ್ಷ ರೂಪಾಯಿ ಉಚಿತ ಚಿಕಿತ್ಸೆ ಮತ್ತು ತ್ವರಿತ ಬೆಳೆ ಪರಿಹಾರವನ್ನು ಘೋಷಿಸಿದರು. ಬಡ ಕುಟುಂಬಗಳಿಗೆ 3.5 ಲಕ್ಷ ರೂಪಾಯಿ ವೆಚ್ಚದಲ್ಲಿ 100 ಗಜ ಮತ್ತು ಎರಡು ಕೋಣೆಗಳ ಮನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಜಾತಿ ಸಮೀಕ್ಷೆ ಮತ್ತು ಕೆನೆಪದರ ಮಿತಿಯನ್ನು 10 ಲಕ್ಷ ರೂಪಾಯಿಗಳಿಗೆ ಏರಿಸುವುದಾಗಿಯೂ ಖರ್ಗೆ ಘೋಷಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!