ನವದೆಹಲಿ, ಮಾ.21: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ರಾತ್ರಿ ಬಂಧಿಸಿದೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮದಿಂದ ಕೇಜ್ರಿವಾಲ್ಗೆ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ‘ಇ.ಡಿ’ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ವಿಚಾರಣೆಗಾಗಿ ತಲುಪಿದ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ‘ಇ.ಡಿ’ ಯಿಂದ ಅರವಿಂದ್ ಕೇಜ್ರಿವಾಲ್ಗೆ ಪದೇ ಪದೇ ಸಮನ್ಸ್ ಜಾರಿ ಮಾಡಿದರೂ ಅವರು ಹಾಜರಾಗಲಿಲ್ಲ. ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬಂಧನವನ್ನು ವಿರೋಧಿಸಿ ಕೇಜ್ರಿವಾಲ್ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.
ಅಬಕಾರಿ ನೀತಿ ಪ್ರಕರಣ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ
ಅಬಕಾರಿ ನೀತಿ ಪ್ರಕರಣ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ
Date: