ನವದೆಹಲಿ, ಮಾ. 29: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೊನೆಗೂ ವೇಳಾಪಟ್ಟಿ ಘೋಷಣೆಯಾಗಿದೆ. ಈ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು.
ಮೇ 10 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
ನಾಮಪತ್ರ ಸಲ್ಲಿಸಲು ಎಪ್ರಿಲ್ 20 ಕೊನೆಯ ದಿನ, ಎ. 21 ರಂದು ನಾಮಪತ್ರಗಳ ಸ್ಕ್ರುಟಿನಿ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಎಪ್ರಿಲ್ 24 ಕೊನೆಯ ದಿನವಾಗಿದೆ. ಇಂದಿನಿಂದ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.
ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಮತ್ತು ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.