Thursday, October 22, 2026
Thursday, October 22, 2026

ತಮಿಳುನಾಡಿನ ಮಾಜಿ ರಾಜ್ಯಪಾಲ ರೋಸಯ್ಯ ನಿಧನ

ತಮಿಳುನಾಡಿನ ಮಾಜಿ ರಾಜ್ಯಪಾಲ ರೋಸಯ್ಯ ನಿಧನ

Date:

ಹೈದರಾಬಾದ್: ಏಕೀಕೃತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತಮಿಳುನಾಡಿನ ಮಾಜಿ ರಾಜ್ಯಪಾಲ ಕೆ. ರೋಸಯ್ಯ (88) ಇಂದು ನಿಧನರಾದರು.

ಕೊಣಿಜೇಟಿ ರೋಸಯ್ಯ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ಹೈದರಾಬಾದ್‌ನಲ್ಲಿ ನಿಧನರಾದರು.

ಹಿರಿಯ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾಗಿದ್ದ ಅವರು, ಹಲವಾರು ವರ್ಷಗಳ ಕಾಲ ಆಂಧ್ರ ಮುಖ್ಯಮಂತ್ರಿಗಳ ಸಂಪುಟದಲ್ಲಿ ಸೇವೆ ಸಲ್ಲಿಸಿದ್ದರು.

ತೆನಾಲಿ ಸಮೀಪದ ವೇಮೂರು ಗ್ರಾಮದವರಾದ ರೋಸಯ್ಯ, ಯುವ ಕಾಂಗ್ರೆಸ್‌ನಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಎರಡು ಬಾರಿ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದರು.

ತಮಿಳುನಾಡಿನ ರಾಜ್ಯಪಾಲರಾಗಿದ್ದ ಅವರು ತಮ್ಮ ಅವಧಿ ಮುಗಿದ ನಂತರ ಸಕ್ರಿಯ ರಾಜಕಾರಣದಿಂದ ದೂರ ಉಳಿದು ಹೈದರಾಬಾದ್‌ನಲ್ಲಿ ನೆಲೆಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಐತಿಹಾಸಿಕ ಜಂಬೂ ಸವಾರಿ ಸಂಪನ್ನ

ಮೈಸೂರು, ಅ.21: ಮೈಸೂರು ದಸರಾ ಮಹೋತ್ಸವದ ವೈಭವದ ಪ್ರತೀಕವಾದ ಜಂಬೂಸವಾರಿಗೆ ಅರಮನೆ...

ಬನ್ನಿ ಬಂಗಾರವಾಗಲಿ, ನಾಡು ಸಮೃದ್ಧಿಯಾಗಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು, ಅ.21: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಸಂಭ್ರಮದ ಅಂಗವಾಗಿ,...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಚಂಡಿಕಾಯಾಗ, ಘಂಟಾನಾದ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಕಾಪು, ಅ.21: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ...
error: Content is protected !!