ಮುಂಬಯಿ, ಫೆ.13: ಕಾಂಗ್ರೆಸ್ ಪಕ್ಷ ತೊರೆದ ಒಂದು ದಿನದ ನಂತರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಮಂಗಳವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಮಹಾರಾಷ್ಟ್ರ ಬಿಜೆಪಿಯ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಮತ್ತು ಮುಂಬೈ ಬಿಜೆಪಿ ಮುಖಂಡ ಆಶಿಶ್ ಶೆಲಾರ್ ಇತರರ ಸಮ್ಮುಖದಲ್ಲಿ ಚವಾಣ್ ಬಿಜೆಪಿಗೆ ಸೇರ್ಪಡೆಗೊಂಡರು. ಬಳಿಕ ಮಾತನಾಡಿದ ಅವರು, ನನ್ನ ಹೊಸ ರಾಜಕೀಯ ಜೀವನ ಆರಂಭವಾಗಿದೆ ಎಂದರು.
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಬಿಜೆಪಿಗೆ ಸೇರ್ಪಡೆ

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಬಿಜೆಪಿಗೆ ಸೇರ್ಪಡೆ
Date: