Friday, December 27, 2024
Friday, December 27, 2024

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

Date:

ನವದೆಹಲಿ, ಡಿ. 26: ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಗುರುವಾರ ರಾತ್ರಿ ವಿಧಿವಶರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಗುರುವಾರ ಸಂಜೆ ಅವರನ್ನು ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. 2004 ರಿಂದ 2014 ರವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಈ ವರ್ಷ ಏಪ್ರಿಲ್ ನಲ್ಲಿ ಅವರು ರಾಜ್ಯಸಭೆಯಿಂದ ನಿವೃತ್ತಿಯಾಗಿದ್ದರು.

ಗಣ್ಯರಿಂದ ತೀವ್ರ ಸಂತಾಪ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ರಾಜ್ಯಾದ್ಯಂತ ಶುಕ್ರವಾರ (ಡಿಸೆಂಬರ್ 27) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇ- ಖಾತಾ ಪಡೆಯಲು ಐದು ದಾಖಲೆಗಳು ಕಡ್ಡಾಯ

ಬೆಂಗಳೂರು, ಡಿ.27: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ - ಖಾತಾ...

ಸಿ.ಎ ಅಂತಿಮ ಪರೀಕ್ಷೆ: ಜ್ಞಾನಸುಧಾ ಹಳೆ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ, ಡಿ.27: ಐ.ಸಿ.ಎ.ಐ ನಡೆಸಿದ 2024ರ ನವೆಂಬರ್ - ಸಿ.ಎ ಅಂತಿಮ...

ಎನ್.ಸಿ.ಸಿ ಕೆಡೆಟ್‌ಗಳಿಗೆ ವಿವಿಧ ಸಾಫ್ಟ್ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಯಕ್ರಮ

ಉಡುಪಿ, ಡಿ.27: ಎನ್.ಸಿ.ಸಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವು ಉದ್ಯಮಶೀಲತೆ ಮತ್ತು...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ರಜತ ಸಂಭ್ರಮದ ಪೋಸ್ಟರ್ ಬಿಡುಗಡೆ

ಬೆಳ್ಮಣ್, ಡಿ.27: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!