Tuesday, November 17, 2026
Tuesday, November 17, 2026

ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆ

ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆ

Date:

ನವದೆಹಲಿ, ಮಾ.31: ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಮಂಗಳವಾರ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಖಂತ ಮಜುಂದಾರ್ ಸೇರಿದಂತೆ ಹಿರಿಯ ಪಕ್ಷದ ನಾಯಕರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. ಪೇಸ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ರಿಜಿಜು, ಇದೊಂದು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದರು.

ಕಳೆದ 12 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಕೆಲಸದಿಂದ ಪ್ರೇರಿತರಾಗಿ ಮಾಜಿ ಟೆನಿಸ್ ಆಟಗಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಅವರು ಹೇಳಿದರು.

ಬಳಿಕ ಮಾತನಾಡಿದ ಪೇಸ್, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಇದು ಜೀವನದ ಒಂದು ದೊಡ್ಡ ದಿನ. ಖೆಲೋ ಇಂಡಿಯಾ ಆಂದೋಲನ ಮತ್ತು ಟಾಪ್ಸ್ ಯೋಜನೆಯನ್ನು ಶ್ಲಾಘಿಸಿದ ಪೇಸ್, ​​ಕ್ರೀಡೆ ಮತ್ತು ಯುವಕರಿಗೆ ಸೇವೆ ಸಲ್ಲಿಸಲು ಇದು ತಮಗೆ ಸಿಕ್ಕ ದೊಡ್ಡ ಅವಕಾಶ ಎಂದು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲಾವಿದರೆಂದರೆ ಕಲಾತಪಸ್ವಿಗಳು: ಪೇಜಾವರ ಶ್ರೀ

ಉಡುಪಿ, ನ.16: ತಮ್ಮ ಬದುಕನ್ನೇ ಯಕ್ಷಗಾನಕ್ಕೆ ಮುಡಿಪಾಗಿಟ್ಟು ಕಲಾರಸಿಕರನ್ನು ರಂಜಿಸಿ ಯಕ್ಷಗಾನವನ್ನು...

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹಕ್ಕೆ ಚಾಲನೆ

ಉಡುಪಿ, ನ.16: ನಗರದ ಕವಿ ಮುದ್ದಣ ಮಾರ್ಗದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ...

ಬಾಲಕಾರ್ಮಿಕ ಪದ್ಧತಿ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ

ಧಾರವಾಡ, ನ.16: ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವುದು...
error: Content is protected !!