Monday, September 28, 2026
Monday, September 28, 2026

ಪರೀಕ್ಷೆ ಬರೆಯಲಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ: ಪ್ರಧಾನಿ ನರೇಂದ್ರ ಮೋದಿ

ಪರೀಕ್ಷೆ ಬರೆಯಲಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ: ಪ್ರಧಾನಿ ನರೇಂದ್ರ ಮೋದಿ

Date:

ನವದೆಹಲಿ, ಆ.15: ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವದ ನೇತೃತ್ವ ವಹಿಸಿ ಧ್ವಜಾರೋಹಣ ನಡೆಸಿದರು. ಮೊದಲ ಬಾರಿಗೆ, ಕೆಂಪು ಕೋಟೆಯಲ್ಲಿ ವಂದೇ ಮಾತರಂ ಅನ್ನು ಹಾಡಲಾಯಿತು.

ಬಳಿಕ ಮಾತನಾಡಿದ ಅವರು, ಈ ವರ್ಷದ ಆಚರಣೆಗಳು ಯುವ ಶಕ್ತಿಯನ್ನು ಸ್ಮರಿಸುವ ಮೂಲಕ, 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ಯುವ ಭಾರತದ ಕೊಡುಗೆಯನ್ನು ಗುರುತಿಸುತ್ತದೆ.

ವಿವಿಧ ಸಾರ್ವಜನಿಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಉಚಿತ ಆನ್‌ಲೈನ್ ತರಬೇತಿಯನ್ನು ಕೇಂದ್ರ ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಪ್ರಧಾನಿ ಘೋಷಿಸಿದರು. ಮುಂದಿನ ಒಂದು ವರ್ಷದೊಳಗೆ ಒಂದು ಕೋಟಿ ಯುವಕರಿಗೆ ಸರ್ಕಾರವು ಎಐ- ಕೌಶಲ್ಯ ತರಬೇತಿಯನ್ನು ನೀಡಲಿದೆ ಎಂದು ಅವರು ಘೋಷಿಸಿದರು. ಇತ್ತೀಚಿನ ದಿನಗಳಲ್ಲಿ, ದೇಶದ ಕೆಲವು ಭಾಗಗಳು ತೀವ್ರ ಪ್ರವಾಹ ಮತ್ತು ಭೂಕುಸಿತಗಳಿಗೆ ಸಾಕ್ಷಿಯಾಗಿವೆ, ಇದು ಅನೇಕ ಕುಟುಂಬಗಳ ಮೇಲೆ ಪರಿಣಾಮ ಬೀರಿದೆ ಎಂದು ಅವರು ಹೇಳಿದರು.ಇಡೀ ರಾಷ್ಟ್ರವು ಅವರ ಜೊತೆ ದೃಢವಾಗಿ ನಿಲ್ಲುತ್ತದೆ ಎಂದು ಅವರು ಹೇಳಿದರು. ಒಂದು ರಾಷ್ಟ್ರವು ತನ್ನ ದೃಢಸಂಕಲ್ಪ ಮತ್ತು ಸಾಮರ್ಥ್ಯದ ಬಲದಿಂದ ಮುಂದುವರಿಯುವಾಗ ಅದು ಶ್ರೇಷ್ಠವಾಗುತ್ತದೆ.

2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮರ್ಥ್ಯದ ಗುರಿಯೊಂದಿಗೆ ಸರ್ಕಾರ ಮುಂದುವರಿಯುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಕಳೆದ 12 ವರ್ಷಗಳಲ್ಲಿ, ಕೋಟ್ಯಂತರ ನಾಗರಿಕರ ದೃಢಸಂಕಲ್ಪ ಮತ್ತು ಸಮರ್ಪಣೆ ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಹಾಯ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಅವಧಿಯಲ್ಲಿ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ಅವರು ಹೇಳಿದರು. ಒಂದು ಕಾಲದಲ್ಲಿ ದುರ್ಬಲ ಐದು ಆರ್ಥಿಕತೆಗಳಲ್ಲಿ ಒಂದಾಗಿ ಪರಿಗಣಿಸಲ್ಪಟ್ಟಿದ್ದ ಭಾರತವು ಈಗ ವಿಶ್ವದ ಪ್ರಮುಖ ಮತ್ತು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ಮೋದಿ ಹೇಳಿದರು.

2047 ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು. ಕಾಡಿನಲ್ಲಿದ್ದ ನಕ್ಸಲರ ಸದ್ದು ನಿಂತಿದೆ, ಆದರೆ ನಾಡಿನಲ್ಲಿ ಪ್ರಸ್ತುತ ನಕ್ಸಲ್ ಮನಸ್ಥಿತಿ ಇನ್ನೂ ಜೀವಂತವಾಗಿದೆ, ಜನರು ಮುಖ್ಯವಾಗಿ ಯುವಜನರು ಎಚ್ಚರದಿಂದಿರಬೇಕು ಎಂದು ಪ್ರಧಾನಿ ಹೇಳಿದರು.

ದಿಮಾಗಿ ನಕ್ಸಲ್ ಹೇಳಿಕೆ- ವಿರೋಧ ಪಕ್ಷಗಳು ಕೆಂಡಾಮಂಡಲ

ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯದ ಸಂದೇಶ ನೀಡುವಾಗ ಇತ್ತೀಚೆಗೆ ನಡೆದ ಜಂತರ್ ಮಂತರ್ ಪ್ರತಿಭಟನೆಯನ್ನು ಪರೋಕ್ಷವಾಗಿ ಉಲ್ಲೇಖಿಸಿ, ದೇಶದಲ್ಲಿ ದಿಮಾಗಿ ನಕ್ಸಲ್ ಇನ್ನೂ ಜೀವಂತವಾಗಿದೆ ಎಂದು ಹೇಳಿದಕ್ಕೆ ವಿರೋಧ ಪಕ್ಷಗಳು ಕೆಂಡಾಮಂಡಲವಾಗಿವೆ. ಇದು ಪ್ರಧಾನಿ ಅವರ ಹತಾಶ ಮನೋಭಾವ ತೋರಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!