ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯ ಸರ್ಕಾರೇತರ ಸಂಸ್ಥೆಯಾದ ರಾಜೀವ್ ಗಾಂಧಿ ಪ್ರತಿಷ್ಠಾನ (ಆರ್‌ಜಿಎಫ್) ಇದರ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿಯನ್ನು ರದ್ದು ಮಾಡಲಾಗಿದೆ. ಕಾನೂನು ಉಲ್ಲಂಘನೆಯ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಅಂತರ-ಸಚಿವಾಲಯ ಸಮಿತಿ ನಡೆಸಿದ ತನಿಖೆಯ ನಂತರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
ರಾಜೀವ್ ಗಾಂಧಿ ಪ್ರತಿಷ್ಠಾನ (ಆರ್‌ಜಿಎಫ್) ಪದಾಧಿಕಾರಿಗಳಾಗಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ, ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕಾರ್ಯನಿರ್ವಹಿಸುತ್ತಿದ್ದಾರೆ.