ನವದೆಹಲಿ: ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಏಪ್ರಿಲ್ ತಿಂಗಳಲ್ಲಿ 122 ವರ್ಷಗಳ ಬಳಿಕ ವಿಪರೀತ ಬಿಸಿ ಅನುಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢವು 122 ವರ್ಷಗಳಲ್ಲಿ ಅತ್ಯಂತ ಬಿಸಿಯಾದ ಏಪ್ರಿಲ್ ಅನ್ನು ಅನುಭವಿಸಿದೆ.
ಐಎಂಡಿ ಪ್ರಕಾರ, ಏಪ್ರಿಲ್‌ನಲ್ಲಿ ಸರಾಸರಿ ಗರಿಷ್ಠ ತಾಪಮಾನವು ಮಧ್ಯ ಭಾರತಕ್ಕೆ 37.78 ಡಿಗ್ರಿ ಸೆಲ್ಸಿಯಸ್‌ನಲ್ಲಿ ಅತ್ಯಧಿಕವಾಗಿದೆ, ಆದರೆ ವಾಯುವ್ಯ ಭಾರತಕ್ಕೆ 35.9 ಡಿಗ್ರಿ, ಸಾಮಾನ್ಯಕ್ಕಿಂತ ಸುಮಾರು 3.35 ಡಿಗ್ರಿ ಹೆಚ್ಚಾಗಿದೆ.
ದೇಶದಲ್ಲಿ 1901 ರಲ್ಲಿ 35.05 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ದೇಶದಾದ್ಯಂತ ಮಳೆ ಕಡಿಮೆಯಾಗಿದ್ದು, ವಿಶೇಷವಾಗಿ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನವು ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ಐಎಂಡಿ ಮಹಾನಿರ್ದೇಶಕ ಎಂ ಮೊಹಾಪಾತ್ರ ಹೇಳಿದ್ದಾರೆ.