Saturday, October 3, 2026
Saturday, October 3, 2026

ಏಷ್ಯಾ ಕಪ್ ಪಂದ್ಯ ಶುಲ್ಕವನ್ನು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ಸಂತ್ರಸ್ತರಿಗೆ ದಾನ ಮಾಡುತ್ತೇನೆ: ಸೂರ್ಯಕುಮಾರ್ ಯಾದವ್

ಏಷ್ಯಾ ಕಪ್ ಪಂದ್ಯ ಶುಲ್ಕವನ್ನು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ಸಂತ್ರಸ್ತರಿಗೆ ದಾನ ಮಾಡುತ್ತೇನೆ: ಸೂರ್ಯಕುಮಾರ್ ಯಾದವ್

Date:

ದುಬೈ, ಸೆ.29: ಭಾನುವಾರ ದುಬೈ ನಲ್ಲಿ ನಡೆದ ಏಷ್ಯಾ ಕಪ್ ಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಭಾರತ ಅಜೇಯವಾಗಿ ದಿಗ್ವಿಜಯ ಸಾಧಿಸಿದೆ. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಏಷ್ಯಾ ಕಪ್‌ನ ಸಂಪೂರ್ಣ ಪಂದ್ಯ ಶುಲ್ಕವನ್ನು ದೇಶದ ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ದಾನ ಮಾಡಲಿದ್ದಾರೆ.

“ನಮ್ಮ ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತ ಕುಟುಂಬಗಳನ್ನು ಬೆಂಬಲಿಸಲು ಈ ಪಂದ್ಯಾವಳಿಯ ನನ್ನ ಪಂದ್ಯ ಶುಲ್ಕವನ್ನು ದಾನ ಮಾಡಲು ನಾನು ನಿರ್ಧರಿಸಿದ್ದೇನೆ. ನೀವು ಯಾವಾಗಲೂ ನನ್ನ ಆಲೋಚನೆಗಳಲ್ಲಿರುತ್ತೀರಿ. ಜೈ ಹಿಂದ್,” ಎಂದು ಸೂರ್ಯಕುಮಾರ್ ಯಾದವ್ ಗೆಲುವಿನ ನಂತರ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಟಿ20 ಪಂದ್ಯದಲ್ಲಿ ಭಾರತದ ಆಟಗಾರರು ಪ್ರತಿ ಪಂದ್ಯಕ್ಕೆ ನಾಲ್ಕು ಲಕ್ಷ ರೂ.ಗಳನ್ನು ಪಡೆಯುತ್ತಾರೆ. ಅಂದರೆ ಸೂರ್ಯಕುಮಾರ್ ಯಾದವ್ ಏಳು ಪಂದ್ಯಗಳಿಗೆ ಒಟ್ಟು 28 ಲಕ್ಷ ರೂ.ಗಳನ್ನು ದೇಣಿಗೆ ನೀಡಲಿದ್ದಾರೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!