Saturday, September 21, 2024
Saturday, September 21, 2024

ವಿನೇಶ್ ಫೋಗಟ್ ಅನರ್ಹತೆ: ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಪ್ರತಿಭಟನೆ

ವಿನೇಶ್ ಫೋಗಟ್ ಅನರ್ಹತೆ: ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಪ್ರತಿಭಟನೆ

Date:

ನವದೆಹಲಿ, ಆ.7: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿರುವ ವಿಚಾರದಲ್ಲಿ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ​​(ಐಒಎ) ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್‌ಗೆ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ ಎಂದು ಕೇಂದ್ರ ಕ್ರೀಡಾ ಸಚಿವ ಡಾ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಮಹಿಳಾ ಕುಸ್ತಿಪಟುಗಳಿಗೆ ಕೇಂದ್ರವು ಎಲ್ಲಾ ರೀತಿಯ ಸಹಾಯವನ್ನು ನೀಡುತ್ತಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದಾಗಿ ಐಒಎ ಅಧ್ಯಕ್ಷ ಪಿ.ಟಿ. ಉಷಾ ಅವರಿಗೆ ಕರೆ ಮಾಡಿ ಪ್ರತಿಭಟಿಸಲು ಹೇಳಿದ್ದಾರೆ. ಫೋಗಟ್ 50 ಕೆಜಿ ವಿಭಾಗದಲ್ಲಿ ಆಡುತ್ತಿದ್ದು, ಆಕೆಯ ತೂಕ ನಿಗದಿತ ಮಾನದಂಡಕ್ಕಿಂತ 100 ಗ್ರಾಂ ಹೆಚ್ಚು ಕಂಡುಬಂದಿದೆ ಎಂಬ ಕಾರಣ ನೀಡಿ ಅವರನ್ನು ಫೈನಲ್ ಪಂದ್ಯದಿಂದ ಅನರ್ಹಗೊಳಿಸಲಾಗಿದೆ.

ದೇಶಾದ್ಯಂತ ಕ್ರೀಡಾಭಿಮಾನಿಗಳು ವಿನೇಶ್ ಫೋಗಟ್ ಅನರ್ಹತೆಗೆ ಸಂಬಂಧಿಸಿದಂತೆ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಭಾರತೀಯ ಕ್ರೀಡಾಪಟುಗಳ ಮನೋಸ್ಥೈರ್ಯವನ್ನು ಕುಗ್ಗಿಸಲು ಷಡ್ಯಂತ್ರ ನಡೆದಿದೆ ಎಂಬ ಕೂಗು ಕೇಳಿಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳ ಗಣ್ಯರು ವಿನೇಶ್ ಫೋಗಟ್ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ನಡೆಸಿದ ಸಾಧನೆಯನ್ನು ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!