Monday, January 27, 2025
Monday, January 27, 2025

ಹರಿದ್ವಾರದಲ್ಲಿ ಪೇಜಾವರ ಶ್ರೀ ಹಾಗೂ ಕಾಶೀ ಮಠಾಧೀಶರ ಸಮಾಗಮ

ಹರಿದ್ವಾರದಲ್ಲಿ ಪೇಜಾವರ ಶ್ರೀ ಹಾಗೂ ಕಾಶೀ ಮಠಾಧೀಶರ ಸಮಾಗಮ

Date:

ಹರಿದ್ವಾರ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥರು ಶ್ರೀ ಕಾಶೀ ಮಠ ಸಂಸ್ಥಾನದ ಹರಿದ್ವಾರ ಪುಣ್ಯಕ್ಷೇತ್ರದಲ್ಲಿರುವ ಶ್ರೀ ವ್ಯಾಸ ಆಶ್ರಮದಲ್ಲಿರುವ ಶ್ರೀ ವ್ಯಾಸ ಮಂದಿರ, ಸದ್ಗುರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನ ಭೇಟಿ ಬಳಿಕ ವ್ಯಾಸ ಘಾಟ್ ನಲ್ಲಿ ಗಂಗಾ ದರ್ಶನ ನಡೆಸಿದರು.

ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಪೇಜಾವರ ಶ್ರೀಗಳನ್ನು ಇಂದು ಆತ್ಮೀಯವಾಗಿ ಬರಮಾಡಿ ಸ್ವಾಗತಿಸಿದರು. ಪರಸ್ಪರ ಯತಿಗಳವರು ಪುಷ್ಪ ಮಾಲಾರ್ಪಣೆ ಮೂಲಕ ಅಭಿನಂದಿಸಿದರು.

ಬಳಿಕ ಮಾತನಾಡಿದ ಪೇಜಾವರ ಶ್ರೀಗಳು, ಶ್ರೀಗಳವರ ಬಾಂಧವ್ಯ, ಸ್ನೇಹ ಕಂಡು ತುಂಬಾ ಸಂತೋಷವಾಯಿತು. ನಮ್ಮೆಲ್ಲರ ಮೂಲಗುರುಗಳಾದ ಮಧ್ವಾಚಾರ್ಯರಿಗೆ ಸ್ಮರಿಸುತ್ತಾ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ದೇವರಿಗೆ ಶ್ರೀಗಳವರು ಸಂಸ್ಥಾನ ಹಾಗೂ ಭಕ್ತಜನರು ಸಮರ್ಪಿಸಿದನ್ನು ಸಂತೋಷದಿಂದ ಸ್ವೀಕರಿಸಲಾಗಿದೆ.

ತಮ್ಮ ಗುರುಗಳಾದ ವೃಂದಾವನಸ್ಥ ಪರಮಪೂಜ್ಯ ಶ್ರೀ ವಿಶ್ವೇಶ ತೀರ್ಥರು ಹರಿದ್ವಾರಕ್ಕೆ ಬಂದ ಸಂದರ್ಭದಲ್ಲಿ ವ್ಯಾಸಾಶ್ರಮದಲ್ಲಿರುವ ವ್ಯಾಸ ಘಾಟಿಗೆ ಬಂದು ಪುಣ್ಯ ಗಂಗಾ ಸ್ನಾನ, ಶ್ರೀ ದೇವರಿಗೆ ಪೂಜಾ ಪುರಸ್ಕಾರ ನಡೆಸುತ್ತಿದ್ದರು ಎಂದು ಸ್ಮರಿಸಿಕೊಂಡರು.

ಕೊಚ್ಚಿನ್ ತಿರುಮಲ ದೇವಳದ ಮೊಕ್ತೇಸರರಾದ ಜಗನ್ನಾಥ್ ಶೆಣೈ, ಜಿ.ಎಸ್.ಬಿ ಸೇವಾ ಮಂಡಳದ ಆರ್. ಜಿ. ಭಟ್, ದೆಹಲಿ ಜಿ.ಎಸ್.ಬಿ ಸಮಾಜದ ಪ್ರಕಾಶ್ ಪೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ. 29: ಕಿನ್ನಿಮೂಲ್ಕಿಯಲ್ಲಿ ನೇರ ಸಂದರ್ಶನ

ಉಡುಪಿ, ಜ.27: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ...

ಫೆ. 19: ಅಜ್ಜರಕಾಡು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ

ಉಡುಪಿ, ಜ.27: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ...

ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ: ವಾರ್ಷಿಕ ಭಜನಾ ಮಂಗಲೋತ್ಸವ

ಕಾರ್ಕಳ, ಜ.27: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ 7ನೇ...

ಮುಡಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್

ಬೆಂಗಳೂರು, ಜ.27: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಭೂ ಮಂಜೂರಾತಿಗೆ ಸಂಬಂಧಿಸಿದ...
error: Content is protected !!