24 ಗಂಟೆಗಳಲ್ಲಿ ದೇಶಾದ್ಯಂತ 42,640 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,99,77,861 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. 91 ದಿನಗಳ ನಂತರ ಅತ್ಯಂತ ಕಡಿಮೆ ದೈನಂದಿನ ಪಾಸಿಟಿವ್ ಪ್ರಕರಣ ಕಂಡುಬಂದಿರುವುದು ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭರವಸೆಯ ಆಶಾಕಿರಣ ಮೂಡಿಸಿದೆ.
ಇದೇ ವೇಳೆ 81,839 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಕುಸಿತ ಮುಂದುವರಿದಿದ್ದು, ದೇಶದಲ್ಲಿ ಒಟ್ಟು 6,62,521 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,89,26,038 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1167 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,89,302 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 28,87,66,201 ಡೋಸ್ ಲಸಿಕೆ ನೀಡಲಾಗಿದೆ.
ಜೂನ್ 21ರಂದು ದೇಶಾದ್ಯಂತ 86,13,373 ಡೋಸ್ ಲಸಿಕೆ ನೀಡಲಾಗಿದ್ದು ಇದು ವಿಶ್ವದಲ್ಲೇ ಅತ್ಯಂತ ದೊಡ್ಡ ಲಸಿಕಾ ಅಭಿಯಾನ ಎಂಬ ದಾಖಲೆ ಬರೆದಿದೆ.
ಜೂನ್ 21 ರಂದು 16,64,360 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 39,40,72,142 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.