Friday, October 16, 2026
Friday, October 16, 2026

ಮಹಾಭಾರತದ ‘ಭೀಮ’ ವಿಧಿವಶ

ಮಹಾಭಾರತದ ‘ಭೀಮ’ ವಿಧಿವಶ

Date:

ನವದೆಹಲಿ: ಬಿ.ಆರ್. ಚೋಪ್ರಾ ನಿರ್ದೇಶನದ ಮಹಾಭಾರತ ಧಾರಾವಾಹಿಯಲ್ಲಿ ಭೀಮನ ಪಾತ್ರದಲ್ಲಿ ಮಿಂಚಿ ಮನೆಮಾತಾಗಿದ್ದ ಹಿರಿಯ ನಟ ಹಾಗೂ ಕ್ರೀಡಾಪಟು ಪ್ರವೀಣ್ ಕುಮಾರ್ ಸೋಬ್ಟಿ ವಿಧಿವಶರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕುಟುಂಬದ ಮೂಲಗಳ ಪ್ರಕಾರ ಅವರು ಸೋಮವಾರ ರಾತ್ರಿ ಕೊನೆಯುಸಿರೆಳೆದರು.

ಪಂಜಾಬ್ ನಲ್ಲಿ ಹುಟ್ಟಿದ ಪ್ರವೀಣ್ ಕುಮಾರ್ ಅವರು ಕಾಮನ್ವೆಲ್ತ್ ಹಾಗೂ ಏಷ್ಯನ್ ಕ್ರೀಡಾಕೂಟಗಳಲ್ಲಿ ಭಾರತವನ್ನು ಹ್ಯಾಮರ್ ಥ್ರೋನಲ್ಲಿ ಪ್ರತಿನಿಧಿಸಿ ಹಲವಾರು ಪದಕಗಳನ್ನು ಗೆದ್ದಿದ್ದರು. ಒಲಿಂಪಿಕ್ಸ್ ನಲ್ಲಿಯೂ ಅವರು ಭಾಗವಹಿಸಿದ್ದರು.

ಸುಮಾರು 30 ಚಲನಚಿತ್ರಗಳಲ್ಲಿ ನಟಿಸಿದ್ದ ಅವರು, 2013ರಲ್ಲಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಟಿಕೆಟ್ ನಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಮುಂದಿನ ವರ್ಷದಲ್ಲಿ ಬಿಜೆಪಿ ಸೇರ್ಪಡೆಯಾಗಿ ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!