Sunday, January 19, 2025
Sunday, January 19, 2025

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ

Date:

ಮುಂಬೈ, ಅ.13: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ಸದಸ್ಯ ಬಾಬಾ ಸಿದ್ದಿಕ್ ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ 9.30ರ ಸುಮಾರಿಗೆ ಬಾಂದ್ರಾ ಪೂರ್ವದ ಶಾಸಕರಾದ ಸಿದ್ದಿಕ್ ಅವರ ಪುತ್ರ ಜೀಶಾನ್ ಅವರ ಕಚೇರಿ ಬಳಿ ಶೂಟರ್‌ಗಳು ಆರು ಗುಂಡುಗಳನ್ನು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ಬಂಧಿಸಲಾಗಿದೆ. ಬಾಬಾ ಸಿದ್ದಿಕ್ ಅವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. 66ರ ಹರೆಯದ ಎನ್‌ಸಿಪಿ ನಾಯಕನಿಗೆ ನಾಲ್ಕು ಗುಂಡುಗಳು ತಗುಲಿದ್ದು, ಅವರ ಒಬ್ಬ ಸಹಾಯಕನಿಗೆ ಗುಂಡೇಟಿನಿಂದ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮುನ್ನವೇ ಗುಂಡಿನ ದಾಳಿ ನಡೆದಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆಸ್ಪತ್ರೆಯ ಪೊಲೀಸರು ಮತ್ತು ವೈದ್ಯರೊಂದಿಗೆ ಮಾತನಾಡಿದ್ದಾರೆ. “ಘಟನೆಯು ಅತ್ಯಂತ ದುರದೃಷ್ಟಕರವಾಗಿದೆ. ಅವರು (ಸಿದ್ದಿಕ್) ಸಾವನ್ನಪ್ಪಿದ್ದಾರೆ ಎಂಬ ವರದಿಗಳಿವೆ. ಇಬ್ಬರನ್ನು ಬಂಧಿಸಲಾಗಿದೆ, ಒಬ್ಬ ಉತ್ತರ ಪ್ರದೇಶ ಮತ್ತು ಒಬ್ಬ ಹರಿಯಾಣದಿಂದ, ಮತ್ತೊಬ್ಬ ಪರಾರಿಯಾಗಿದ್ದಾನೆ, ನಾನು ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಕೇಳಿದ್ದೇನೆ. ಮತ್ತು ಯಾರೂ ಕಾನೂನು ಮತ್ತು ಸುವ್ಯವಸ್ಥೆಯನ್ನು ತಮ್ಮ ಕೈಗೆ ತೆಗೆದುಕೊಳ್ಳದಂತೆ ನೋಡಿಕೊಳ್ಳಿ, ಮುಂಬೈನಲ್ಲಿ ಗ್ಯಾಂಗ್ ವಾರ್ ತರಹದ ಪರಿಸ್ಥಿತಿ ಮರುಕಳಿಸಲು ಬಿಡಬಾರದು”ಎಂದು ಅವರು ಹೇಳಿದ್ದಾರೆ.

ಗೃಹ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಿದ್ದಿಕ್ ಅವರ ಸಾವಿನ ಬಗ್ಗೆ ತಿಳಿದು ಆಘಾತಕ್ಕೊಳಗಾಗಿದ್ದಾರೆ ಮತ್ತು ಅವರು ಉತ್ತಮ ಸಹೋದ್ಯೋಗಿ ಮತ್ತು ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕ್ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ ಪಕ್ಷದಲ್ಲಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕ್ ಅವರನ್ನು ಆಗಸ್ಟ್ ನಲ್ಲಿ ಕಾಂಗ್ರೆಸ್ ನಿಂದ ಉಚ್ಛಾಟಿಸಲಾಗಿತ್ತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...
error: Content is protected !!