Wednesday, July 29, 2026
Wednesday, July 29, 2026

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಶನಿವಾರ ಸಂಜೆ ಪ್ರಮಾಣ?

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಶನಿವಾರ ಸಂಜೆ ಪ್ರಮಾಣ?

Date:

ಮುಂಬಯಿ, ಜ.31: ವಿಮಾನ ಅವಘಡದಲ್ಲಿ ಸಾವನ್ನಪ್ಪಿದ ಮಾಹರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸ್ಥಾನಕ್ಕೆ ಪತ್ನಿ ರಾಜ್ಯಸಭಾ ಸದಸ್ಯೆ ಸುನೇತ್ರಾ ಪವಾರ್ ಶನಿವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸುನೇತ್ರಾ ಅವರು ತಮ್ಮ ಮಗ ಪಾರ್ಥ್ ಅವರೊಂದಿಗೆ ದಕ್ಷಿಣ ಮುಂಬೈನಲ್ಲಿರುವ ತಮ್ಮ ಪತಿಯ ಅಧಿಕೃತ ನಿವಾಸ ‘ದೇವಗಿರಿ’ಗೆ ಬೆಳಗಿನ ಜಾವ ತಲುಪಿದ್ದಾರೆ. ಶನಿವಾರ (ಜನವರಿ 31) ಎನ್‌ಸಿಪಿಯ ಶಾಸಕಾಂಗ ಸಭೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆಸಲಿದೆ, ನಂತರ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಾಅಯ್ಕೆ ಮಾಡಲಾಗುವುದು. ತನ್ಮೂಲಕ ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಲಿದ್ದಾರೆ.

ಲೋಕಭವನದಲ್ಲಿ ಸಂಜೆ 5 ಗಂಟೆಗೆ ನಡೆಯುವ ಸರಳ ಸಮಾರಂಭದ ನಂತರ ಎನ್‌ಸಿಪಿಯ 40 ಶಾಸಕರು ಶನಿವಾರ (ಜನವರಿ 31) ವಿಧಾನಭವನದಲ್ಲಿ ಸಭೆ ಸೇರಲಿದ್ದಾರೆ.

ಸುನೇತ್ರಾ (62) ಅವರು ಮಹಾರಾಷ್ಟ್ರ ವಿಧಾನಸಭೆಯ ಯಾವುದೇ ಸದನದ ಸದಸ್ಯರಲ್ಲ ಆದರೆ ರಾಜ್ಯಸಭಾ ಸ್ಥಾನವನ್ನು ಹೊಂದಿದ್ದಾರೆ. ರಾಜ್ಯಸಭೆಯಲ್ಲಿ ಅವರ ಮಗ ಅವರ ಸ್ಥಾನವನ್ನು ತುಂಬಲಿದ್ದಾರೆ ಎಂದು ಊಹಿಸಲಾಗಿದೆ. ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದರು.

ನನಗೆ ಮಾಹಿತಿಯಿಲ್ಲ: ಶರದ್ ಪವಾರ್

ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಅವರು ಸುನೇತ್ರಾ ಅವರ ಪ್ರಮಾಣ ವಚನ ಸಮಾರಂಭದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು. ಇದು ಅವರ ಪಕ್ಷದ ನಿರ್ಧಾರ. ಆತುರದ ನೇಮಕಾತಿಯ ಹಿಂದಿನ ಕಾರಣಗಳ ಬಗ್ಗೆ ನನಗೆ ಸ್ಪಷ್ಟತೆ ಇಲ್ಲ ಎಂದು ಹೇಳಿದರು.

ಏತನ್ಮಧ್ಯೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಎನ್‌ಸಿಪಿ ಉಪಮುಖ್ಯಮಂತ್ರಿ ಹುದ್ದೆಗೆ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ ಎಂದು ಹೇಳಿದರು. ನಾವು ಅಜಿತ್ ದಾದಾ ಅವರ ಕುಟುಂಬ ಮತ್ತು ಎನ್‌ಸಿಪಿಯ ಬೆಂಬಲಕ್ಕೆ ನಿಲ್ಲುತ್ತೇವೆ. ಸುನೇತ್ರಾ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಬಾರಾಮತಿಯಲ್ಲಿ ತಮ್ಮ ಅತ್ತಿಗೆ ಮತ್ತು ಹಾಲಿ ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಲೆ ವಿರುದ್ಧ ಎನ್‌ಸಿಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ನಂತರ ರಾಜಕೀಯದಲ್ಲಿ ಜನಪ್ರಿಯ ಹೆಸರಾದರು. ಸೋಲನ್ನು ಅನುಭವಿಸಿ ನಂತರ ರಾಜ್ಯಸಭೆಗೆ ಆಯ್ಕೆಯಾದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!