Friday, July 24, 2026
Friday, July 24, 2026

ದೇಶಾದ್ಯಂತ ಕೋವಿಡ್-19 ಸಕ್ರಿಯ ಪ್ರಕರಣಗಳಲ್ಲಿ ಏರಿಕೆ

ದೇಶಾದ್ಯಂತ ಕೋವಿಡ್-19 ಸಕ್ರಿಯ ಪ್ರಕರಣಗಳಲ್ಲಿ ಏರಿಕೆ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 16,764 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಹಲವಾರು ತಿಂಗಳ ನಂತರ ದೇಶಾದ್ಯಂತ ಒಂದೇ ದಿನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡಿದ್ದು, ಎಚ್ಚರಿಕೆಯ ಕರೆಗಂಟೆಯಾಗಿದೆ.

ಇದೇ ವೇಳೆ 7,585 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 91,361 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,42,66,363 ಮಂದಿ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 220 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,81,080 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 144.54 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. 

ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 1,270. ಮಹಾರಾಷ್ಟ್ರ (450) ದೆಹಲಿ (320)

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...

ಉಡುಪಿ ಜ್ಞಾನಸುಧಾ: ನೀಟ್ ಸಾಧಕರಿಗೆ ಅಭಿನಂದನೆ

ಉಡುಪಿ, ಜು.24: ರಾಷ್ಟ್ರಮಟ್ಟದ ಎಂಬಿಬಿಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ...
error: Content is protected !!