Wednesday, May 6, 2026
Wednesday, May 6, 2026

ಒಮಿಕ್ರಾನ್ ಅಬ್ಬರ- ದೇಶಾದ್ಯಂತ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ

ಒಮಿಕ್ರಾನ್ ಅಬ್ಬರ- ದೇಶಾದ್ಯಂತ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 13,154 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಹಲವಾರು ತಿಂಗಳ ನಂತರ ದೇಶಾದ್ಯಂತ ಒಂದೇ ದಿನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡಿದ್ದು, ಎಚ್ಚರಿಕೆಯ ಕರೆಗಂಟೆಯಾಗಿದೆ.

ಇದೇ ವೇಳೆ 7,486 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 82,402 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,42,58,778 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 268 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,80,860 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 1,43,83,22,742 ಡೋಸ್ ಲಸಿಕೆ ನೀಡಲಾಗಿದೆ. ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 961ದೆಹಲಿ (263) ಮಹಾರಾಷ್ಟ್ರ (252)

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

error: Content is protected !!