ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 37,379 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 11,007 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,71,830 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,43,06,414 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 124 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,82,017 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಲ್ಲಿಯವರೆಗೆ 1,46,70,18,464 ಡೋಸ್ ಲಸಿಕೆ ನೀಡಲಾಗಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 3.24ಕ್ಕೆ ಏರಿದೆ.
ಮೂರನೇ ಅಲೆ: ಕಳೆದ ಒಂದು ವಾರಗಳಿಂದ ದೇಶಾದ್ಯಂತ ಪಾಸಿಟಿವ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವುದು ಕೊರೊನಾ ಮೂರನೇ ಅಲೆಯ ಆಗಮನದ ಮುನ್ಸೂಚನೆ. ಇದೇ ರೀತಿ ವಿದೇಶಗಳಲ್ಲಿ ಮೂರನೇ ಅಲೆಯ ಸಂದರ್ಭದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.