ನವದೆಹಲಿ, ಜ.13: ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 30 ಕೋಟಿಗೂ ಹೆಚ್ಚು ಆಯುಷ್ಮಾನ್ ಕಾರ್ಡ್‌ಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ, ತನ್ಮೂಲಕ 30 ಕೋಟಿಗೂ ಹೆಚ್ಚು ಜನರು ಪ್ರಧಾನಿ ಮೋದಿಯವರ ಉಚಿತ ಚಿಕಿತ್ಸೆಯ ಭರವಸೆಯನ್ನು ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ಏನಿದು ಆಯುಷ್ಮಾನ್ ಭಾರತ್ ಯೋಜನೆ?: ಈ ಯೋಜನೆಯು ದುರ್ಬಲ ಕುಟುಂಬಗಳಿಗೆ ವಾರ್ಷಿಕ ಐದು ಲಕ್ಷ ರೂಪಾಯಿಗಳ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಇದು ದೇಶಾದ್ಯಂತ ಹತ್ತು ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ. ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2018 ರಲ್ಲಿ ಪ್ರಾರಂಭಿಸಿದರು.