Sunday, January 19, 2025
Sunday, January 19, 2025

ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಡಿಕ್ಕಿ

ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಡಿಕ್ಕಿ

Date:

ಯು.ಬಿ.ಎನ್.ಡಿ., ಅ.11: ಶುಕ್ರವಾರ ರಾತ್ರಿ 8.50ರ ಸುಮಾರಿಗೆ ಚೆನ್ನೈ ವಿಭಾಗದ ಗುಮ್ಮಿಡಿಪೂಂಡಿ ಬಳಿಯ ಕವರೈಪೆಟ್ಟೈ ಎಂಬಲ್ಲಿ ಮೈಸೂರು ದರ್ಭಾಂಗ ಎಕ್ಸ್‌ಪ್ರೆಸ್ ಅಪಘಾತಕ್ಕೀಡಾಗಿದೆ. ಶುಕ್ರವಾರ ಆಂಧ್ರಪ್ರದೇಶದತ್ತ ಸಾಗುತ್ತಿದ್ದ ರೈಲು, ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಮೈಸೂರು ದರ್ಭಾಂಗ ಎಕ್ಸ್‌ಪ್ರೆಸ್‌ನಲ್ಲಿದ್ದ ಕೆಲವರಿಗೆ ಗಾಯಗಳಾಗಿವೆ. ಘಟನೆಯ ಗಂಭೀರತೆ ಎಷ್ಟಿತ್ತೆಂದರೆ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಪೆರಂಬೂರ್ ಮೂಲಕ ದರ್ಭಾಂಗಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ತಿರುವಳ್ಳೂರು ಸಮೀಪದ ಕವರಪ್ಪೆಟ್ಟೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ದೌಡಾಯಿಸಿದ್ದಾರೆ ಎಂದು ತಿರುವಳ್ಳೂರು ಪೊಲೀಸರು ಹೇಳಿದ್ದಾರೆ.

ರೈಲು ನಂ.12578 ಮೈಸೂರಿನಿಂದ ದರ್ಭಾಂಗಕ್ಕೆ ತೆರಳುತ್ತಿದ್ದ ಆರು ಬೋಗಿಗಳು ಸುಮಾರು 20.30 ಗಂಟೆಗಳಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದವು. ಯಾವುದೇ ಪ್ರಾಣ ಹಾನಿಯ ಬಗ್ಗೆ ವರದಿಯಾಗಿಲ್ಲ. ಕೆಲವರಿಗೆ ಗಾಯಗಳಾಗಿವೆ. ವೈದ್ಯಕೀಯ ಪರಿಹಾರ ವ್ಯಾನ್ ಮತ್ತು ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!