ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 37,593 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 34,169 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,22,327 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,17,54,281 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 648 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,35,758 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 61,90,930 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 59,55,04,593 ಡೋಸ್ ಲಸಿಕೆ ನೀಡಲಾಗಿದೆ.