ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 30,941 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 36,275 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,70,640 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,19,59,680 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 350 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,38,560 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 64,05,28,644 ಡೋಸ್ ಲಸಿಕೆ ನೀಡಲಾಗಿದೆ.