ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 5,326 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 8,043 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 79,097 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,41,95,060 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 453 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,78,007 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಲ್ಲಿಯವರೆಗೆ 1,38,34,78,181 ಡೋಸ್ ಲಸಿಕೆ ನೀಡಲಾಗಿದೆ.