ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 6,317 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 6,906 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 78,190 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 1,38,95,90,670 ಡೋಸ್ ಲಸಿಕೆ ನೀಡಲಾಗಿದೆ.
ಒಮಿಕ್ರಾನ್ ವಿವರ: ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 213ಕ್ಕೆ ಏರಿದೆ. ಇಲ್ಲಿಯವರೆಗೆ 90 ಮಂದಿ ಒಮಿಕ್ರಾನ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.