ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 9,195 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 7,347 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 77,002 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,42,51,292 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 302 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,80,592 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 64,61,321 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 1,43,15,35,641 ಡೋಸ್ ಲಸಿಕೆ ನೀಡಲಾಗಿದೆ. ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 781.