ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 8,895 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ದೇಶದಲ್ಲಿ ಒಟ್ಟು 99,155 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 2796 ಮಂದಿ (ಕೇರಳ, ಬಿಹಾರದ ಸಾವಿನ ಲೆಕ್ಕ ಈ ಹಿಂದೆ ನೀಡಿರಲಿಲ್ಲ, ಅದನ್ನು ಇಂದಿನ ಸಾವಿನ ಲೆಕ್ಕಕ್ಕೆ ಸೇರಿಸಲಾಗಿದೆ) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 1,27,61,83,065 ಡೋಸ್ ಲಸಿಕೆ ನೀಡಲಾಗಿದೆ.