ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 6,396 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. 13,450 ಮಂದಿ ಕಳೆದ 24 ಗಂಟೆಗಳಲ್ಲಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಒಟ್ಟು 69,897 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 201 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 0.69 ರಷ್ಟಿದೆ.