ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 11,106 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-6111) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 12,789 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,26,620 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 459 ಮಂದಿ ಸಾವನ್ನಪ್ಪಿದ್ದಾರೆ.