ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 10,929 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 12,509 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,46,950 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 392 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 1,07,92,19,546 ಡೋಸ್ ಲಸಿಕೆ ನೀಡಲಾಗಿದೆ.