ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 11,451 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-7124) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 13,204 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,42,826 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 266 ಮಂದಿ ಸಾವನ್ನಪ್ಪಿದ್ದಾರೆ.