ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 18,132 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ- 10,691) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 21,563 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 2,27,347 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,32,93,478 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 193 ಮಂದಿ (ಕೇರಳ- 85) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,50,782 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಲ್ಲಿಯವರೆಗೆ 95,19,84,373 ಡೋಸ್ ಲಸಿಕೆ ನೀಡಲಾಗಿದೆ.




By
ForthFocus™