ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 14,313 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ- 6,996) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 26,579 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 2,14,900 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,33,20,057 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 181 ಮಂದಿ (ಕೇರಳ-84) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,50,963 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 65,86,092 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 95,89,78,049 ಡೋಸ್ ಲಸಿಕೆ ನೀಡಲಾಗಿದೆ.