ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 14,146 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 19,788 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,95,846 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,34,19,749 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 144 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,52,124 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 41,20,772 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 97,65,89,540 ಡೋಸ್ ಲಸಿಕೆ ನೀಡಲಾಗಿದೆ.