ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 13,058 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-6,676) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 19,470 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,83,118 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,34,58,801 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 164 ಮಂದಿ (ಕೇರಳ-60) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,52,454 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಲ್ಲಿಯವರೆಗೆ 98,67,69,411 ಡೋಸ್ ಲಸಿಕೆ ನೀಡಲಾಗಿದೆ.