ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 25,404 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 37,127 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,62,207 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,24,84,159 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 339 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,43,213 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 78,66,950 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 75,22,38,324 ಡೋಸ್ ಲಸಿಕೆ ನೀಡಲಾಗಿದೆ.