ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 47,092 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-32,803) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 35,181 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,89,583 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,20,28,825 ಮಂದಿ ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 509 ಮಂದಿ (ಕೇರಳ-173) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 4,39,529 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 81,09,244 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 66,30,37,334 ಡೋಸ್ ಲಸಿಕೆ ನೀಡಲಾಗಿದೆ.