ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 31,923 ಹೊಸ ಪಾಸಿಟಿವ್ (ಕೇರಳ-19,675) ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 31,990 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,01,604 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,28,15,731 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 282 ಮಂದಿ (ಕೇರಳ-142) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,46,050 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 71,38,205 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 83,39,90,049 ಡೋಸ್ ಲಸಿಕೆ ನೀಡಲಾಗಿದೆ.




By
ForthFocus™