ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 31,382 ಹೊಸ ಪಾಸಿಟಿವ್ (ಕೇರಳ-19,682) ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 32,542 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,00,162 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,28,48,273 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 318 ಮಂದಿ (ಕೇರಳ-152) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,46,368 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 72,20,642 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 84,15,18,026 ಡೋಸ್ ಲಸಿಕೆ ನೀಡಲಾಗಿದೆ.




By
ForthFocus™