ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 28,326 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-16,671) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ದೇಶದ ದೈನಂದಿನ ಪಾಸಿಟಿವ್ ಕೇಸ್ ಗಳಲ್ಲಿ ಶೇ. 58.85 ಕೇರಳದಲ್ಲಿ ಕಂಡುಬಂದಿದೆ.
ಇದೇ ವೇಳೆ 26,032 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,03,476 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,29,02,351 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 260 ಮಂದಿ (ಕೇರಳ-120) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,46,918 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 68,42,786 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 85,60,81,527 ಡೋಸ್ ಲಸಿಕೆ ನೀಡಲಾಗಿದೆ.