ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 42,618 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ- 29,322) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 36,385 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,05,681 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,21,00,001 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 330 ಮಂದಿ (ಕೇರಳ-131) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,40,225 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 58,85,687 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 67,72,11,205 ಡೋಸ್ ಲಸಿಕೆ ನೀಡಲಾಗಿದೆ.




By
ForthFocus™