24 ಗಂಟೆಗಳಲ್ಲಿ ದೇಶಾದ್ಯಂತ 84,332 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,93,59,155 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ತನ್ಮೂಲಕ 70 ದಿನಗಳ ನಂತರ ದೇಶದಲ್ಲಿ ಅತ್ಯಂತ ಕಡಿಮೆ ದೈನಂದಿನ ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ಇದೇ ವೇಳೆ 1,21,311 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 10,80,690 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,79,11,384 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 4002 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,67,081 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 24,96,00,304 ಡೋಸ್ ಲಸಿಕೆ ನೀಡಲಾಗಿದೆ.




By
ForthFocus™