Saturday, February 7, 2026
Saturday, February 7, 2026

ಕೋವಿಡ್-19: ಸಕ್ರಿಯ ಪ್ರಕರಣಗಳಲ್ಲಿ ಕುಸಿತ

ಕೋವಿಡ್-19: ಸಕ್ರಿಯ ಪ್ರಕರಣಗಳಲ್ಲಿ ಕುಸಿತ

Date:

24 ಗಂಟೆಗಳಲ್ಲಿ ದೇಶಾದ್ಯಂತ 62,224 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,96,33,105 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 1,07,628 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಕುಸಿತ ಮುಂದುವರಿದಿದ್ದು, ದೇಶದಲ್ಲಿ ಒಟ್ಟು 8,65,432 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,83,88,100 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 2542 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,79,573 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 26,19,72,014 ಡೋಸ್ ಲಸಿಕೆ ನೀಡಲಾಗಿದೆ.

ದೇಶದ ಚೇತರಿಕೆ ಪ್ರಮಾಣವು ಶೇ. 95.80 ಕ್ಕೆ ಏರಿದೆ. ವಾರದ ಪಾಸಿಟಿವಿಟಿ ಪ್ರಮಾಣವು ಗಣನೀಯ ಕುಸಿತ ಕಂಡಿದ್ದು ಶೇ. 4.17 ರಷ್ಟು ಇದೆ. ದೈನಂದಿನ ಪಾಸಿಟಿವಿಟಿ ಪ್ರಮಾಣವು ಶೇ. 3.22 ಇದೆ. ಸತತ 9 ದಿನಗಳಿಂದ ದೈನಂದಿನ ಪಾಸಿಟಿವಿಟಿ ಪ್ರಮಾಣವು ಶೇ. 5 ಕ್ಕಿಂತ ಕಡಿಮೆಯಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!