ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 38,667 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ, ವಾರದ ಪಾಸಿಟಿವಿಟಿ ಪ್ರಮಾಣ ಶೇ 2.05 ರಷ್ಟಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 35,743 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,87,673 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,13,38,088 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 478 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,30,732 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಲ್ಲಿಯವರೆಗೆ 53.61 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.




By
ForthFocus™