ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 36,571 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ದೇಶದಲ್ಲಿ ಒಟ್ಟು 3,63,605 ಸಕ್ರಿಯ ಪ್ರಕರಣಗಳಿವೆ. ಚೇತರಿಕೆ ಪ್ರಮಾಣ ಶೇ 97.54 ರಷ್ಟಿದೆ.
ಆಗಸ್ಟ್ 19 ರಂದು 18,86,271 ಮಾದರಿಗಳನ್ನು ಪರೀಕ್ಷಿಸಲಾಗಿದೆ, ಇಲ್ಲಿಯವರೆಗೆ ಒಟ್ಟು 50,26,99,702 ಮಾದರಿಗಳ ಕೋವಿಡ್ ಪರೀಕ್ಷೆ ನಡೆದಿದೆ ಎಂದು ಇಂಡಿಯನ್ ಕೌಂಸಿಲ್ ಆಫ್ ಮೆಡಿಕಲ್ ರಿಸರ್ಚ್ ಪ್ರಕಟಣೆಯಲ್ಲಿ ತಿಳಿಸಿದೆ.