ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 38,628 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 40,017 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,12,153 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,10,55,861 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 617 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,27,371 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 49,55,138 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 50,10,09,609 ಡೋಸ್ ಲಸಿಕೆ ನೀಡಲಾಗಿದೆ.