24 ಗಂಟೆಗಳಲ್ಲಿ ದೇಶಾದ್ಯಂತ 46,617 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,04,58,251 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 59,384 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 5,09,637 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,95,48,302 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 853 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,00,312 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಲ್ಲಿಯವರೆಗೆ 34,00,76,232 ಡೋಸ್ ಲಸಿಕೆ ನೀಡಲಾಗಿದೆ. ದೇಶದ ಚೇತರಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದ್ದು ಶೇ. 97.01 ರಷ್ಟಿದೆ. ವಾರದ ಪಾಸಿಟಿವಿಟಿ ಪ್ರಮಾಣ ಶೇ. 2.57 ರಷ್ಟು ಇದ್ದರೆ ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 2.48 ರಷ್ಟಿದೆ. ಸತತ 25 ದಿನಗಳಿಂದ ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 5 ಕ್ಕಿಂತ ಕಡಿಮೆಯಿದೆ.
ಜುಲೈ 1 ರಂದು 18,80,026 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 41,42,51,520 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.